Hasana news
hasana news today
hasana news latest
hasana news Landslide again in Shiradighat ban on movement of heavy vehicles
ಶಿರಾಢಿಘಾಟ್‌ನಲ್ಲಿ ಮತ್ತೆ ಭೂಕುಸಿತ – ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ


Vishwapriya News
ಹಾಸನ, ಜುಲೈ 14 : ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು ಮತ್ತೆ ಭೂಕುಸಿತವು ಉಂಟಾಗಿದೆ.
ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು, ಅದರೆ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತ ಉಂಟಾಗಿದೆ, ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.
ವಾರದ ಹಿಂದೆ ರಸ್ತೆ ಕುಸಿದ ಸ್ಥಳಕ್ಕೆ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತ ಸಂಭವಿಸಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು, ಲಘು ವಾಹನಗಳಿಗೆ ಏಕ ಮುಖ ಸಂಚಾರದಂತೆ ಚಲಿಸಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ರಸ್ತೆಯಿಂದ ಆತಂಕ ಹೆಚ್ಚಾಗಿದೆ