•   Tuesday, 05 Jul, 2022
ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ನಳಿನ್ ಕುಮಾರ್ ಕಟೀಲು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿ ನೂತನ ಫ್ಲೈಓವರ್ ನಿರ್ಮಾಣ - ನಳಿನ್ ಕುಮಾರ್ ಕಟೀಲ್

Generic placeholder image
  Vishwapriya News

ಮಂಗಳೂರು , ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರವು ಅನುಮೋದನೆಯನ್ನು ನೀಡಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲು ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಅನ್ನು ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ ಕೇಂದ್ರ ಹೆದ್ದಾರಿ ಸಚಿವರಾಗಿರುವ ನಿತಿನ್ ಗಡ್ಕರಿಯವರು ಅನುಮೋದನೆಯನ್ನು ನೀಡಿರುವುದರಿಂದ ಬಹುಕಾಲದ ಮಂಗಳೂರಿಗರ ಬೇಡಿಕೆಯು ಈಡೇರಿದಂತಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಾಗಿರುವದರಿಂದಾಗಿ  ಸಂಚಾರ ಸಮಸ್ಯೆಯು ಎದುರಾಗುತ್ತಿತ್ತು ಇಲ್ಲಿ ಹೆದ್ದಾರಿಗೆ ಮಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆಯು ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಬದಲಿ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹವು ಕೇಳಿಬಂದಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧಾರವನ್ನು ಕೈಗೊಂಡಿದೆ