•   Tuesday, 29 Nov, 2022

ಶೀಘ್ರದಲ್ಲೇ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ - ಲಾತವ್ಯ ಆಚಾರ್ಯ.

Generic placeholder image
  Vishwapriya News

ಉಡುಪಿ : ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿಯ ನೇಮಕ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಶಿರೂರು ಮಠದ ಭಕ್ತ ಸಮಿತಿಯ ಪರವಾಗಿ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿರುವಂತಹ ಲಾತವ್ಯ ಆಚಾರ್ಯ ಇವರು ಮುಂದಿನ ಕಾನೂನು ಹೋರಾಟದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆಯನ್ನು ನೀಡಿದರು.

ಶೀಘ್ರದಲ್ಲೇ ಶಿರೂರು ಮಠದ ಭಕ್ತ ಸಮಿತಿಯ ಮತ್ತು ಹಿರಿಯ ಧಾರ್ಮಿಕ ಮುಖಂಡರ ಸಭೆಯನ್ನು ಕರೆದು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ಹೇಳಿದ್ದಾರೆ.