•   Wednesday, 22 Mar, 2023
olympics hockey india bronze medal

ಕಂಚು ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಹಾಕಿ ತಂಡ.

Generic placeholder image
  Vishwapriya News

ಟೋಕಿಯೋ: ಬರೊಬ್ಬರಿ 4 ದಶಕಗಳ ಬಳಿಕ ಇದೀಗ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಹಾಕಿ ತಂಡವು ಇತಿಹಾಸವನ್ನೇ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಕಂಚಿನ ಪದಕ ತಂದಿದೆ.

ಹೌದು.. ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ನ ಪುರುಷರ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ  ಮೂರನೇ ಸ್ಥಾನಕ್ಕಾಗಿ ನಡೆದ ಹೋರಾಟ ಪಂದ್ಯದಲ್ಲಿ  ಭಾರತ ತಂಡವು ಜರ್ಮನಿ ವಿರುದ್ಧವಾಗಿ 5-4 ಗೋಲುಗಳ ಅಂತರದ ಭರ್ಜರಿ ಗೆಲುವನ್ನು ದಾಖಲಿಸಿ ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವೀರೋಚಿತ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತವಾಗಿ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು. ಇದೀಗ 41 ವರ್ಷಗಳ ಬಳಿಕ ಭಾರತಕ್ಕೆ ಪದಕವನ್ನು ತಂದುಕೊಟ್ಟಿದ್ದಾರೆ.

ಇನ್ನು ಈ ಹಿಂದೆ 1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕವನ್ನು ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದ ಸಾಧನೆಯನ್ನು ಮಾಡಿದೆ