•   Wednesday, 22 Mar, 2023
Latest udupi news udupi news today udupi news corona cases in udupi Udupi DC

ಉಡುಪಿ ಜಿಲ್ಲೆ – ಸಾವಿರಕ್ಕೆ ಏರಿಕೆಯಾದ ಸಕ್ರಿಯ ಕೊರೊನಾ ಪ್ರಕರಣ.

Generic placeholder image
  Vishwapriya News

ಉಡುಪಿ ಜುಲೈ 31: ಉಡುಪಿಯಲ್ಲಿ ಇದೀಗ ಕೊರೊನಾ ಸಕ್ರಿಯ ಪ್ರಕರಣವು ಸಾವಿರಕ್ಕೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಉಡುಪಿಯ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಅಸಮಧಾನ ವ್ಯಕ್ತಪಡಿಸಿದ್ದು, ಜವಬ್ದಾರಿ ಸ್ಥಾನದಲ್ಲಿರುವವರು ಮೊದಲು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆಯು ಇನ್ನೂ ಮುಕ್ತಾಯ ಆಗಿಲ್ಲ, ಜನರಲ್ಲಿ ಕೊರೋನ ಹೋಗಿದೆ ಎನ್ನುವಂತಹ ಭಾವನೆ ಬೇಡ, ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಸರಕಾರದ ಸೂಚನೆಗಳನ್ನು ಪಾಲಿಸಬೇಕು, ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೋನಾ ಮಾರ್ಗಸೂಚಿಯನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿನಿಂದ ಪ್ರತಿದಿನ ನೂರು ಪಾಸಿಟಿವ್ ಕೇಸ್ ಗಳು ಬರುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ. ಆದರೆ ಕಳೆದ ಎರಡು ಮೂರು ದಿನಗಳಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದ ಜೊತೆಗೆ ಉಡುಪಿಯ ಸಂಪರ್ಕದಲ್ಲಿರುವವರು ಜಿಲ್ಲೆಗೆ ಆಗಮಿಸುತ್ತಿದ್ದು ಇದರಿಂದಾಗಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಪಾಸಿಟಿವ್ ಸಂಖ್ಯೆಯು ಹೆಚ್ಚಾಗಿದ್ದರೂ ಕೂಡ ಕಾರ್ಯಕ್ರಮಗಳು ನಡೆಯುತ್ತಿದೆ

ದೊಡ್ಡ ಸಂಖ್ಯೆಯಲ್ಲಿ ಜನರನ್ನು ಒಟ್ಟುಗೂಡಿಸಿ ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ, ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಹೆಚ್ಚಿನ ಕಷ್ಟವಾಗಲಿದೆ ಎಂದು ಅವರು ಎಚ್ಚರಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಅವರು ಅಸಮಾಧಾನ ವ್ಯಕ್ತಪಡಿಸಿದರು.